ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ


ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವಾಲಯವು 1994ರಲ್ಲಿ ಸ್ಥಾಪನೆಗೊಂಡಿದ್ದು ಇದಕ್ಕೆ ಪೂರ್ವದಲ್ಲಿ ಇದು ಸಮಾಜ ಕಲ್ಯಾಣ ಇಲಾಖೆಯ ಒಂದು ಭಾಗವಾಗಿತ್ತು. ಮಾನ್ಯ ಇಲಾಖಾ ಸಚಿವರ ನೇತೃತ್ವದಲ್ಲಿ ಸಹಕಾರ ನೀಡಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು 45 ಸಿಬ್ಬಂದಿಗಳನ್ನೊಳಗೊಂಡ ಸಚಿವಾಲಯವನ್ನು ಹೊಂದಿರುತ್ತದೆ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಹೊಂದಿಕೊಂಡಿರುವ ಇತರೆ ಕ್ಷೇತ್ರ ಇಲಾಖೆಗಳು :

 • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯ
 • ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯ
 • ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ
 • ಕರ್ನಾಟಕ ರಾಜ್ಯ ಮಹಿಳಾ ಆಯೋಗ
 • ಜವಾಹರ ಬಾಲಭವನ ಸೊಸೈಟಿ
 • ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ
 • ರಾಜ್ಯ ಅಂಗವಿಕಲ ವ್ಯಕ್ತಿಗಳ ಆಯುಕ್ತರ ಕಛೇರಿ
 • ಕರ್ನಾಟಕ ಬಾಲವಿಕಾಸ ಅಕಾಡೆಮಿ
 • ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಇಲಾಖೆಯು ರಾಜ್ಯದಲ್ಲಿ ಮಹಿಳೆಯರ, ಮಕ್ಕಳ, ಹಿರಿಯರ ಮತ್ತು ವಿಕಲಚೇತನರ ಕಲ್ಯಾಣ ಹಾಗೂ ಅಭಿವೃದ್ಧಿಯ ಜವಾಬ್ದಾರಿಯನ್ನು ಹೊಂದಿರುತ್ತದೆ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವ ಜೊತೆಗೆ, ಅವಶ್ಯವಾದ ಯೋಜನೆಗಳು, ಕಾರ್ಯಕ್ರಮಗಳನ್ನು ಮತ್ತು ನೀತಿಗಳನ್ನು ಸಿದ್ದಪಡಿಸುತ್ತದೆ ಹಾಗೂ ಮಹಿಳೆಯರ, ಮಕ್ಕಳ ಹಿರಿಯರ ಮತ್ತು ವಿಕಲಚೇತನರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರಯತ್ನಗಳಿಗೆ ಸಹಯೋಗವನ್ನು ಕಲ್ಪಿಸುತ್ತದೆ.
ಸಚಿವಾಲಯವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಡಳಿತ ಇಲಾಖೆಯಾಗಿದ್ದು, ಇದು ಯೋಜನೆಗಳನ್ನು ಹಾಗೂ ನೀತಿಗಳನ್ನು ರೂಪಿಸಲು, ಆಯವ್ಯಯ ಸಿದ್ದಪಡಿಸಲು ಮತ್ತು ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಸೇವೆಗಳ ಜವಾಬ್ದಾರಿಯನ್ನು ಹೊಂದಿದೆ. ಇದು ಯೋಜನೆ, ಹಣಕಾಸು ಮತ್ತು ಇತರೆ ಸಂಬಂಧಿಸಿದ ಸರ್ಕಾರದ ಇಲಾಖೆಗಳೊಂದಿಗೆ ಸಹಯೋಗ ಕಲ್ಪಿಸುತ್ತದೆ. ಮಹಿಳೆಯರ ಮತ್ತು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮಾರ್ಗದರ್ಶನ ಹಾಗೂ ವಿಧಿವಿಧಾನಗಳನ್ನು ರೂಪಿಸುತ್ತದೆ. ಇದು ಶಾಸನ ಸಭೆಗಳಲ್ಲಿ ಶಾಸಕಾಂಗ ಕಾರ್ಯಕ್ರಮಗಳಲ್ಲಿ ಸಹಕರಿಸುತ್ತದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಮಂತ್ರಾಲಯಗಳು ಇಲಾಖೆಗೆ ಸಂಬಂಧಿಸಿದ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲು ಸಹಾಯ ನೀಡುತ್ತದೆ. ಒಟ್ಟಿನಲ್ಲಿ ಇಲಾಖೆಯು ಮಹಿಳೆಯರ, ಮಕ್ಕಳ, ಹಿರಿಯರ ಮತ್ತು ವಿಕಲಚೇತನರಲ್ಲಿ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವ ಉದ್ದೇಶ ಹೊಂದಿದೆ.

ಇತ್ತೀಚಿನ ನವೀಕರಣ​ : 01-06-2019 04:27 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080