ಅಭಿಪ್ರಾಯ / ಸಲಹೆಗಳು

ದೃಷ್ಟಿ ಕಾರ್ಯಾಚರಣೆ

ದೂರದೃಷ್ಠಿ (ವಿಷನ್)

 

  ಇಲಾಖೆಯು ರಾಜ್ಯದ ಮಹಿಳೆಯರನ್ನು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಬಲಿಷ್ಠರಾಗಲು ಮತ್ತು ರಾಜ್ಯದ ಮಕ್ಕಳ ಭವಿಷ್ಯವು ಬಾಲ್ಯಾವಸ್ಥೆಯಿಂದಲೇ ಆಶಾದಾಯಕವಾಗಿರಲು ಭದ್ರ ಬುನಾದಿ ಹಾಕುವ ದೂರದೃಷ್ಠಿಯನ್ನು ಹೊಂದಿದೆ.

 

ಘನೋದ್ದೇಶ (ಮಿಷನ್)

 

*             ಮಹಿಳೆಯರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಬೇಕಾದ ಸಾಂಸ್ಥಿಕ ಮತ್ತು ಆರ್ಥಿಕ ನೆರವನ್ನು ಒದಗಿಸುವುದಾಗಿದೆ.

*             ಮಹಿಳೆಯರ ಮತ್ತು ಮಕ್ಕಳ ಆರೋಗ್ಯ, ಪೌಷ್ಠಿಕತೆ ಹಾಗೂ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲು ಇತರೆ ಸಹ ಇಲಾಖೆಗಳ ಸಹಯೋಗದೊಂದಿಗೆ ಸಮಗ್ರ ಶಿಶು ಅಬಿsವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ

                ಅನುಷ್ಠಾನಗೊಳಿಸುವುದಾಗಿದೆ.

*             ಮಹಿಳೆಯರಲ್ಲಿ ಆರ್ಥಿಕ ಸಾಮಥ್ರ್ಯವನ್ನು ಹೆಚ್ಚಿಸಲು ಶಿಕ್ಷಣ, ಸಾಮಾಜಿಕ ಶಾಸನಗಳು, ಕೌಶಲ್ಯ ಅಬಿsವೃದ್ಧಿ, ಸಾಮಥ್ರ್ಯ ಅಬಿsವೃದ್ಧಿ ಹಾಗೂ ಆದಾಯೋತ್ಪನ್ನ ಚಟುವಟಿಕೆಗಳ ಬಗ್ಗೆ ಅರಿವನ್ನು ಮೂಡಿಸುವುದಾಗಿದೆ. ಈ ಮೂಲಕ

               ಮಹಿಳೆಯರನ್ನು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕವಾಗಿ ಸಬಲೀಕರಣಗೊಳಿಸುವುದಾಗಿದೆ.

*             ಮಕ್ಕಳು ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳುವುದು ಸೇರಿದಂತೆ ಅವರ ಹಕ್ಕುಗಳನ್ನು ಸಂರಕ್ಷಿಸಿ ಅವರು ಬದುಕುಳಿದು ಅಬಿsವೃದ್ಧಿ ಹೊಂದಲು ಪೂರಕವಾಗಿರುವ ಕೇಂದ್ರ 

             ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹಾಗೂ ಯೋಜನೆಗಳನ್ನು ಅನುಷ್ಟಾನಗೊಳಿಸುವುದಾಗಿದೆ.

*             ಮಹಿಳೆಯರು ಮತ್ತು ಮಕ್ಕಳು ಸಮಾಜದಲ್ಲಿ ನ್ಯಾಯಬದ್ಧವಾಗಿ ಸಮಾನತೆಯನ್ನು ಹೊಂದಲು, ಕೇಂದ್ರ ಹಾಗೂ ರಾಜ್ಯ ಸರ್ಕಾರವು ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ರೂಪಿಸಿರುವ ಕಾಯ್ದೆಗಳು ಮತ್ತು

            ಅಧಿನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ವಿವಿಧ ಶೋಷಣೆಗಳಿಂದ ರಕ್ಷಿಸಿ ಸಂಕಷ್ಟ ಪರಿಸ್ಥಿತಿಯಿಂದ ಹೊರತರುವುದಾಗಿದೆ.

*          ಮಹಿಳೆಯರ ಮತ್ತು ಮಕ್ಕಳ ಅಬಿsವೃದ್ಧಿಗಾಗಿ ಇರುವ ಕಾಯ್ದೆಗಳನ್ನು, ಕಾರ್ಯನೀತಿಗಳನ್ನು, ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಲ್ಲಿ ಹಾಗೂ ನಿರ್ದಿಷ್ಟ ಗುರಿಗಳನ್ನು ತಲುಪಲು ಸ್ವಯಂ ಸೇವಾ ಸಂಸ್ಥೆಗಳು,

             ಸರ್ಕಾರೇತರ ಹಾಗೂ ಕಾರ್ಪೋರೇಟ್ ವಲಯಗಳ ಭಾಗವಹಿಸುವಿಕೆಯನ್ನು ಉತ್ತೇಜಿಸುವುದಾಗಿದೆ.

ಇತ್ತೀಚಿನ ನವೀಕರಣ​ : 01-06-2019 03:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080